ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ತಂದೆ ಪೃಥ್ವಿರಾಜ್ ಸಿಂಗ್ (84) ಭಾನುವಾರ ರಾಣಿಪೇಟೆಯ ಅವರ ನಿವಾಸದಲ್ಲಿ ನಿಧನ ಹೊಂದಿದರು.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಮನೆಗೆ ಮರಳಿದ್ದರು. ಭಾನುವಾರ ಆರೋಗ್ಯದಲ್ಲಿ ಏರುಪೇರಾಗಿ ಮಧ್ಯಾಹ್ನ 12ಕ್ಕೆ ನಿಧನರಾದರು. ಸಂಜೆ ರಾಣಿಪೇಟೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲ್ಲೂಕಿನ ಶಂಕರ್ ಸಿಂಗ್ ಕ್ಯಾಂಪಿನ ನಿವಾಸಿ ಪೃಥ್ವಿರಾಜ್ ಸಿಂಗ್ ಅವರು ಸಾರಿಗೆ ಉದ್ಯಮ ನಡೆಸುತ್ತಿದ್ದರು. ಮೃತರ ಮೊದಲ ಪತ್ನಿ ತೀರಿಕೊಂಡಿದ್ದಾರೆ. ಅವರಿಗೆ ಇಬ್ಬರು ಗಂಡು, ಒಬ್ಬ ಹೆಣ್ಣು ಮಗಳಿದ್ದಾರೆ. ಎರಡನೇ ಪತ್ನಿ ಹಾಗೂ ಅವರ ಮಗ ಆನಂದ್ ಸಿಂಗ್ ಇದ್ದಾರೆ.ತಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಅವರು ಅನೇಕ ದಿನಗಳಿಂದ ಕ್ಷೇತ್ರದಿಂದ ದೂರ ಉಳಿದು ಅವರೊಂದಿಗೆ ಆಸ್ಪತ್ರೆಯಲ್ಲಿಯೇ ಇದ್ದರು.