ಸಿಎಂ ಸ್ಥಾನಕ್ಕೆ ಬಿ.ಎಸ್.ವೈ ರಾಜೀನಾಮೆ: ವ್ಯಕ್ತಿ ಸಾವಿಗೆ ಶರಣು

ಚಾಮರಾಜನಗರ: ಬಿ. ಎಸ್. ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯಡಿಯೂರಪ್ಪ ಅವರ ರಾಜೀನಾಮೆಯಿಂದ ಬೇಸರಗೊಂಡ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರದ ವಾಸಿ ರವಿ (38) ಸಾವಿಗೆ ಶರಣಾಗಿರುವ ಅಭಿಮಾನಿ.

ರವಿ ಟೀ ಕ್ಯಾಂಟಿನ್ ನಡೆಸುತ್ತಿದ್ದು, ಸೋಮವಾರ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಷಯ ತಿಳಿದು ಬೇಸರಗೊಂಡಿದ್ದರು ಎನ್ನಲಾಗಿದೆ.

ರಾತ್ರಿವರೆಗೂ ಅಂಗಡಿಯಲ್ಲೇ ವ್ಯಾಪಾರ ಮಾಡುತ್ತಿದ್ದ ರವಿ ಮನೆಗೆ ಹೋಗದೆ ಅಂಗಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಪೆÇಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.