ಮೈಸೂರು- ಮನೆಗೆ ನುಗ್ಗಿ ಲಕ್ಷಾಂತರ ರೂ. ಬೆಲೆಯ ನಗ-ನಾಣ್ಯ ದೋಚಿರುವ ಘಟನೆ ನಡೆದಿದೆ.
ಈ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.
ಸುಮನ್ ಫಂಕ್ಷನ್ ಹಾಲ್ ಮಾಲೀಕರ ಮನೆಯಲ್ಲಿ ಈ ದರೋಡೆ ನಡೆದಿದ್ದು, 6 ಲಕ್ಷ ರೂ. ನಗದು, ಅರ್ಧ ಕೆ.ಜಿ. ಬಂಗಾರವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ.
ಕಳವು ವೇಳೆ ಮನೆಯಲ್ಲಿದ್ದವರ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಗಾಯಾಳುಗಳನ್ನು ಹುಣಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹಿರಿಯ ಪೆÇಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಣಸೂರು ಪೆÇಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.