ಮಾಜಿ ಶಾಸಕ ಇದಿನಬ್ಬ ಪುತ್ರನ ಮನೆ ಮೇಲೆ ಎನ್‍ಐಎ ದಾಳಿ

ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎನ್‍ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

4 ಕಾರುಗಳಲ್ಲಿ 25 ಮಂದಿಯಿದ್ದ ಎಸ್.ಐಎತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‍ಐಎ ಜತೆಗೆ ಮಂಗಳೂರಿನ ಸ್ಥಳೀಯ ಪೆÇಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಪುತ್ರಿಯೊಬ್ಬಳು ಕೇರಳದಲ್ಲಿ ನಾಪತ್ತೆಯಾಗಿದ್ದು, ಐಸಿಸ್ ಸಂಘಟನೆ ಸೇರಿದ್ದಾಗಿ ಹೇಳಲಾಗಿತ್ತು.

ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದುಧೋರಣೆ ಅನುಸರಿಸಿದ್ದರು ಎನ್ನಲಾಗಿದೆ.

ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ.