ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ನೀಡಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಆ.5 ರಿಂದ 15ರ ವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಸೇವೆ, ಪ್ರಸಾದ, ಅನ್ನಸಂತರ್ಪಣೆ, ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ.
ವಾರಾಂತ್ಯದಲ್ಲಿ (ಶನಿವಾರ/ಭಾನುವಾರ) ದೇವರ ದರ್ಶನವನ್ನೂ ನಿರ್ಬಂಧಿಸಲಾಗಿದೆ.
ಭಕ್ತಾದಿಗಳೆಲ್ಲರೂ ಸಹಕರಿಸುವಂತೆ ವಿನಂತಿಸುತ್ತೇವೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.