ಮುಹೂರ್ತ ನೋಡಿ ಖಾತೆ ಸ್ವೀಕರಿಸುವೆ –ಸಚಿವ ಆನಂದ್ ಸಿಂಗ್

ಹೊಸಪೇಟೆ (ವಿಜಯನಗರ): ಮುಹೂರ್ತ ನೋಡಿ ಖಾತೆ ಸ್ವೀಕರಿಸುವೆ ಎಂದು ಸಚಿವ ಆನಂದ್ ಸಿಂಗ್ ಹೇಳಿದರು.

ವಿಜಯನಗರದಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವ ಆನಂದ್ ಸಿಂಗ್ ಮಾತನಾಡಿದರು.

ದೇವರ ಮುಹೂರ್ತ, ನನ್ನ ನಕ್ಷತ್ರ ನೋಡಿಕೊಂಡು ಖಾತೆ ಸ್ವೀಕರಿಸುತ್ತೇನೆ ಎಂದು ಆನಂದ್ ಸಿಂಗ್ ಹೇಳಿದರು.

ರಾಜ್ಯದಲ್ಲಿ ದಿಟ್ಟ, ಸಮರ್ಥ ಅಧಿಕಾರಿಗಳಿದ್ದಾರೆ. ಅವರು ಖಾತೆ ನೋಡುತ್ತಾರೆ. ನಾನು ಅಧಿಕಾರ ವಹಿಸಿಕೊಳ್ಳದಿದ್ದರೆ ಅಭಿವೃದ್ಧಿ ಕುಂಠಿತವಾಗುವುದಿಲ್ಲ. ಜನಪ್ರತಿನಿಧಿಗಳ ಮೇಲೆ ವ್ಯವಸ್ಥೆ ನಡೀತಾ ಇಲ್ಲ. ಶಾಸಕಾಂಗ, ಕಾರ್ಯಾಂಗ ಬಂಡಿ ಇದ್ದಂತೆ ಎಂದು ಅವರು ತಿಳಿಸಿದರು.

ವಿಜಯನಗರ ಜಿಲ್ಲೆಯಲ್ಲಿ ಕಚೇರಿಗಳ ನಿರ್ಮಾಣ, ಅಧಿಕಾರಿಗಳ ನೇಮಕ ಪ್ರಕ್ರಿಯೆ ನಡೆದಿದೆ. ಆರ್ಥಿಕ ಇಲಾಖೆಯಿಂದ ಈಗಾಗಲೇ ಜಿಲ್ಲೆಗೆ 50 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಆನಂದ್ ಸಿಂಗ್, ಖಾತೆ ಗೊಂದಲದ ಬಗ್ಗೆ ನಾನೇನೂ ಹೇಳಲಾರೆ ಎಂದರು.