ಜಸ್ಟೀಸ್ ಬಿ.ವಿ.ನಾಗರತ್ನ ಅವರು ಸೇರಿ 9 ನ್ಯಾಯಮೂರ್ತಿಗಳಿಗೆ ಸುಪ್ರೀಂಗೆ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು

ನವದೆಹಲಿ: ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿ‌ ಆಗಿರುವ ಜಸ್ಟೀಸ್ ಬಿ.ವಿ.ನಾಗರತ್ನ ಅವರೂ ಸೇರಿ  9 ನ್ಯಾಯಮೂರ್ತಿಗಳಿಗೆ ಬಡ್ತಿ ನೀಡುವುದಕ್ಕೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಜಸ್ಟೀಸ್‌ ಎನ್.‌ವಿ.ರಮಣ ನೇತೃತ್ವದ ಕೊಲಿಜಿಯಂ ಈ ಶಿಫಾರಸು ಮಾಡಿದೆ.

ಈ ಪಟ್ಟಿಯಲ್ಲಿ ಮೂವರು ನ್ಯಾಯಾಧೀಶೆಯರೂ ಸೇರಿ 9 ನ್ಯಾಯಮೂರ್ತಿಗಳಿದ್ದು, ಇವರೆಲ್ಲರಿಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ, ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರೇ ಮೂವರು ಮಹಿಳಾ ನ್ಯಾಯಮೂರ್ತಿಗಳು.