ಸುನಂದಾ ಪುಷ್ಕರ್ ಸಾವು ಪ್ರಕರಣ: ಪತಿ ಶಶಿ ತರೂರ್ ನಿರ್ದೋಷಿ

ನವದೆಹಲಿ: ಸುನಂದಾ ಪುಷ್ಕರ್ ಸಾವು ಪ್ರಕರಣದಲ್ಲಿ ಪತಿ ಶಶಿ ತರೂರ್ ನಿರ್ದೋಷಿ ಎಂದು ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ದೆಹಲಿಯ ರೌಸ್ ಅವೆನ್ಯೂ ಸ್ಪೆಷಲ್ ಕೋರ್ಟ್ ಸುನಂದಾ ಪುಷ್ಕರ್ ಮರಣ ಪ್ರಕರಣದಿಂದ ಶಶಿ ತರೂರ್ ಅವರನ್ನು ಖುಲಾಸೆಗೊಳಿಸಿದೆ.

ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಪತಿ ಶಶಿ ತರೂರ್ ಅವರು ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ವಿವಾಹವಾಗಿದ್ದ ಸುನಂದಾ ಪುಷ್ಕರ್ 2014ರ ಜನವರಿ 17ರಂದು ದೆಹಲಿಯ ಫೈವ್ ಸ್ಟಾರ್ ಹೊಟೇಲ್ ನ ಕೋಣೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದರು.

ಸುನಂದಾ ಮರಣಕ್ಕೆ ಶಶಿ ತರೂರ್ ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳು ಕೇಳಿ ಬಂದಿದ್ದವು. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.