ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ; 7ನೇ ಆರೋಪಿ ಬಂಧನ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ಮೈಸೂರಿನ ಮೂರನೇ ಜೆಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ.

ಆರೋಪಿಗಳ ಪೆÇಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೆÇಲೀಸರು ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ 5 ಮಂದಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

7ನೇ ಆರೋಪಿ ಬಂಧನ
ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೆÇಲೀಸರು ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೆÇಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ನೀಡಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಏಳನೆ ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ರಾತ್ರಿ ಕರೆತರಲಾಗಿದೆ ಎಂದು ತಿಳಿದು ಬಂದಿದೆ.