ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ದೇಶಾದ್ಯಂತ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯದಲ್ಲೂ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಹಲವೆಡೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.
ವಿವಿಧೆಡೆ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರನ್ನ ಪೆÇಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ಕಿಚ್ಚು ಹೆಚ್ಚಾಗಿದ್ದು ಪ್ರತಿಭಟನೆಗೂ ಮುನ್ನವೇ ಮೌರ್ಯ ಸರ್ಕಲ್ ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನ ಪೆÇಲೀಸರು ವಶಕ್ಕೆ ಪಡೆದರು.
ಭಾರತ್ ಬಂದ್ ಬಿಸಿ ಕರ್ನಾಟಕ ರಾಜ್ಯದಲ್ಲಿ ಜನಸಾಮಾನ್ಯರಿಗೆ ಅಷ್ಟಾಗಿ ತಟ್ಟಿಲ್ಲ.
ಬೆಂಗಳೂರು ಸೇರಿ ರಾಜ್ಯದಾದ್ಯಂತ ಸರ್ಕಾರಿ, ಖಾಸಗಿ ಬಸ್ ಗಳು, ಆಟೊ, ಟ್ಯಾಕ್ಸಿಗಳ ಓಡಾಟ ಎಂದಿನಂತೆ ಸಾಗಿದೆ.
ಮಾರುಕಟ್ಟೆ, ಹೋಟೆಲ್, ಅಂಗಡಿ-ಮುಂಗಟ್ಟುಗಳು, ಶಾಲಾ-ಕಾಲೇಜುಗಳು ತೆರೆದಿವೆ. ಸಾರ್ವಜನಿಕರ ಓಡಾಟಕ್ಕೆ ಬಂದ್ ನಿಂದ ಪರಿಣಾಮ ಬೀರಿಲ್ಲ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ರಸ್ತೆ ತಡೆ, ಬೈಕ್ ರ್ಯಾಲಿ, ನಡೆದಿದ್ದು, ಕೆಲವೆಡೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಗಿದೆ.
ಮುಂಗಾಗೃತಾ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.