ಆರ್.ಎಸ್‍ಎಸ್, ಬಿಜೆಪಿಯರದ್ದು ತಾಲಿಬಾನ್ ಸಂಸ್ಕೃತಿ -ಸಿದ್ದರಾಮಯ್ಯ

ಬಾದಾಮಿ: ಆರ್.ಎಸ್.ಎಸ್., ಬಿಜೆಪಿಯವರದ್ದು ತಾಲಿಬಾನ್ ಸಂಸ್ಕೃತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಾದಾಮಿಯಲ್ಲಿ ಸಿದ್ದರಾಮಯ್ಯ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ತಾಲಿಬಾನಿಗಳದ್ದು ರಾಕ್ಷಸರ ಪ್ರವೃತ್ತಿ. ಇದೇ ಸಂಸ್ಕೃತಿಯನ್ನು ಆರ್.ಎಸ್.ಎಸ್. ನಾಯಕರು ಬೆಳೆಸಿಕೊಂಡು ಬಂದಿದ್ದಾರೆ ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕ ಸಿ ಟಿ ರವಿಯವರ ಟೀಕೆಗೆ ತಿರುಗೇಟು ನೀಡಿದರು.

ಆರ್.ಎಸ್.ಎಸ್, ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ. ತಾಲಿಬಾನಿಗಳಿಗೆ ಹೇಗೆ ಮನುಷ್ಯತ್ವ, ಸಂಸ್ಕೃತಿ ಇಲ್ಲವೋ ಅದೇ ರೀತಿ ಆರ್.ಎಸ್. ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ ವರ್ತಿಸುತ್ತಾರೆಂದರು.

ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ಯಾರಿಗೆ ನಂಬಿಕೆ ಇಲ್ಲವೋ ಅವರನ್ನು ತಾಲಿಬಾನಿಗಳೆಂದು ಕರೆಯುತ್ತಾರೆ. ಬಿಜೆಪಿ, ಆರ್. ಎಸ್.ಎಸ್. ನವರಿಗೆ ದೇಶದ ಪ್ರಜಾಪ್ರಭುತ್ವ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಅವರನ್ನು ಕೂಡ ತಾಲಿಬಾನ್ ಸಂಸ್ಕೃತಿಯವರು ಎಂದು ಕರೆಯುತ್ತೇವೆ ಎಂದರು.