ಮೈಸೂರು: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ವಂಚಿಸಿದ ಹಿನ್ನಲೆಯಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ಸಾವಿಗೆ ಶರಣಾದ ಪ್ರಕರಣ ಸಂಬಂಧ ನಂಜನಗೂಡು ತಾಲೂಕು ಹುಲ್ಲಹಳ್ಳಿ ಠಾಣೆ ಎಎಸ್ ಐ ಸೇರಿದಂತೆ 8 ಮಂದಿ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಎಎಸ್ ಐ ಎಂ.ಶಿವರಾಜು 8ನೇ ಆರೋಪಿಯಾಗಿದ್ದಾರೆ.
ಕರ್ತವ್ಯ ನಿರ್ವಹಿಸುವ ಠಾಣೆಯಲ್ಲೇ ಶೀವರಾಜು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಯುವತಿ ನ್ಯಾಯ ಕೇಳಿ ಬಂದಾಗ ಸ್ಪಂದಿಸದೆ ಎಎಸ್ ಐ ಶಿವರಾಜು ನಿರ್ಲಕ್ಷ್ಯ ವಹಿಸಿದ್ದಾರೆ ಹಾಗೂ ಆರೋಪಿಗಳು ನೀಡಿದ ಆಮಿಷಕ್ಕೆ ಬಲಿಯಾಗಿ ಯುವತಿ ನೀಡಿದ ದೂರು ದಾಖಲಿಸಿಲ್ಲವೆಂದು ಎಎಸ್ ಐ ಶಿವರಾಜು ಮೇಲೆ ಆರೋಪ ಹೊರಿಸಲಾಗಿದೆ.
ಪ್ರಕರಣದಲ್ಲಿ ಸುರೇಶ, ಗುರುಮಲ್ಲು, ಲೋಕೇಶ್, ಜಡೆ ಮಲ್ಲಯ್ಯ, ಮಲ್ಲಿಕಾರ್ಜುನಯ್ಯ, ಗೌರಮ್ಮ, ರಾಜಮ್ಮ ಎಂಬವರ ಮೇಲೆ ಎಫ್.ಐ.ಆರ್.ದಾಖಲಾಗಿದೆ.
ನಂಜನಗೂಡು ಠಾಣೆ ವೃತ್ತ ನಿರೀಕ್ಷಕರು ನೀಡಿದ ವರದಿ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.