ನಾಳೆಯಿಂದ ನಮ್ಮ ಆಟ ಎಂದರೆ ದುಡ್ಡು ಹಂಚುವುದಾ ಸೋಮಣ್ಣನವರೇ?; ಸಚಿವ ಸೋಮಣ್ಣಗೆ ಹೆಚ್‍ಡಿಕೆ ತರಾಟೆ

ವಿಜಯಪುರ: ಇವತ್ತು ಸಾಯಂಕಾಲದ ತನಕ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಿಂಧಗಿಯಲ್ಲಿ ಫ್ರೀ ಆಗಿ ಬಿಟ್ಟುಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪ ಚುನಾವಣೆ ಬಹಿರಂಗ ಪ್ರಚಾರದ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡರು.

ವಿಜಯಪುರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧೀಗಳೊಂದಿಗೆ ಅವರು ಮಾತನಾಡಿದರು.

ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ? ಎಂದು ಹೆಚ್ ಡಿಕೆ ಪ್ರಶ್ನಿಸಿದರು.

ನಿಮ್ಮ ಆಟವನ್ನು ಬರೀ ಚುನಾವಣೆಗಷ್ಟೇ ಸೀಮಿತ ಮಾಡಿಕೊಳ್ಳುತ್ತೀರೋ ಅಥವಾ ಸುಳ್ಳು ಹೇಳಿಕೊಂಡು, ಸುಳ್ಳು ಜಾಹೀರಾತುಗಳನ್ನು ಕೊಟ್ಟುಕೊಂಡು ಐದು ಲಕ್ಷ ಮನೆ ಕೊಟ್ಟೆ, ಆರು ಲಕ್ಷ ಮನೆ ಕೊಟ್ಟೆ ಅಂತ ಹೇಳಿಕೊಂಡು ತಿರುಗ್ತೀರೋ? ಎಂದು ಸೋಮಣ್ಣ ಅವರಿಗೆ ಬಿಸಿ ಮುಟ್ಟಿಸಿದರು ಹೆಚ್‍ಡಿಕೆ.