ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಗಿ ಕ್ರಮ -ಬಿಎಸ್ ವೈ

ತುಮಕೂರು: ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಗಿ ಕ್ರಮ ಕೈಗೊಳ್ಳಲಾಗುವುದೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ತುಮಕೂರಿನಲ್ಲಿ ಬಿ.ಎಸ್. ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳೊಂಗೆ ಮಾತನಾಡಿದರು.

ಬಿಟ್ ಕಾಯಿನ್ ಹಗರಣ ಕುರಿತು ಬಿಎಸ್ ವೈ ಪ್ರತಿಕ್ರಿಯಿಸಿ, ಬಿಟ್ ಕಾಯಿನ್ ಪ್ರಕರಣ ಪ್ರಧಾನಿಗಳ ಗಮನಕ್ಕೂ ಬಂದಿದೆ. ಇದರಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನವರು ಯಾರೇ ಭಾಗಿಯಾಗಿದ್ದರೂ ಅವರ ಮೇಲೆ ಬಿಗಿಯಾದ ಕ್ರಮವನ್ನು ಜರುಗಿಸಲಾಗುತ್ತದೆ. ಈಗಾಗಲೇ ತನಿಖೆ ಮಾಡಲು ಮುಖ್ಯಮಂತ್ರಿಗಳು ಆದೇಶವನ್ನು ನೀಡಿದ್ದಾರೆ ಎಂದು ಅವರು ಹೇಳಿದರು.