ವಿವಾಹಿತೆ ಮೇಲೆ ಅತ್ಯಾಚಾರ; ಸಂತ್ರಸ್ತೆಯಿಂದ ಹಣ ವಸೂಲಿ: ಇಬ್ಬರ ಬಂಧನ

ಮೈಸೂರು,ನ.22- ವಿವಾಹಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಸಂತ್ರಸ್ತೆಯಿಂದಲೇ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಬಂಧತರು ವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯಿಂದಲೇ 70 ಸಾವಿರ ರೂ. ವಸೂಲಿ ಮಾಡಿದ್ದರು.

ಕೃತ್ಯಕ್ಕೆ ಸಹಾಯ ಮಾಡಿದ ಮಹಿಳೆ ಸೇರಿದಂತೆ ನಾಲ್ಕು ಮಂದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಪತ್ನಿ ಕಾಣೆಯಾಗಿದ್ದಾರೆ ಎಂದು ಪತಿ ದೂರು ನೀಡಿದ್ದರು. ಮಹಿಳೆಯನ್ನು ಪತ್ತೆ ಹಚ್ಚಲು ವಿಚಾರಣೆ ಮಾಡುವಾಗ ಪ್ರಕರಣ ಬೆಳಕಿಗೆ ಬಂದಿದೆ. ಜೊತೆಗೆ ಸಂಘಟನೆಯೊಂದರ ಇಬ್ಬರು ಮುಖಂಡರು ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಹಿಂಸೆ ಮಾಡಿರುವುದನ್ನು ಕುರಿತೂ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪಿರಿಯಾಪಟ್ಟಣ ಪೆÇಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.