ಸ್ವಾತಂತ್ರ್ಯ ಹೋರಾಟಗಾರರ ಉಪವಾಸ ಸತ್ಯಾಗ್ರಹ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಾವೇರಿಯ ಕರ್ನಾಟಕ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಉತ್ತರಾಧಿಕಾರಿಗಳ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಾಯಿತು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸಲಾಯಿತು.

ಕರ್ನಾಟಕ ರಾಜ್ಯದ ಸಮಸ್ತ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳನ್ನು (ವಂಶಸ್ಥರು) ಸ್ವಾತಂತ್ರ್ಯ ಹೋರಾಟಗಾರರ ವಂಶಸ್ಥರು ಎಂದು ಘೋಷಿಸಬೇಕು, ಕರ್ನಾಟಕ ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಮಾಸಿಕ ಗೌರವ ದನವನ್ನು ನೀಡಲು ಆದೇಶಿಸಬೇಕು, ಜಿಲ್ಲಾಧಿಕಾರಿಗಳಿಂದ ಗುರುತಿನ ಪತ್ರವನ್ನು ಕನ್ನಡ ಹಾಗೂ ಇಂಗ್ಲೀಷಿನಲ್ಲಿ ಉತ್ತರಾಧಿಕಾರಿಗಳ ಪ್ರಮಾಣ ಪತ್ರವನ್ನು ಅವರ ಕುಟುಂಬದ ಎಲ್ಲ ಮಕ್ಕಳು ಹಾಗೂ ಮೊಮ್ಮಕ್ಕಳಿಗೆ ನೀಡಲು ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅದೇಶಿಸಬೇಕು, ಕರ್ನಾಟಕ ರಾಜ್ಯದ ಈ ಹೋರಾಟಗಾರರ ಗಂಡು ಮತ್ತು ಹೆಣ್ಣು ಮಕ್ಕಳು ಹಾಗೂ ಮೊಮ್ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ಸರ್ಕಾರಿ ನೌಕರಿಯಲ್ಲಿ ಶೇ. 5ರಷ್ಟು ಮೀಸಲಾತಿಯನ್ನು ಮುಂದುವರಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ.