ಗುಜರಾತ್ ರಾಜ್ಯಕ್ಕೆ ಸಾಗಿಸುತ್ತಿದ್ದ 3 ಲಾರಿ ಅಕ್ರಮ ಅಕ್ಕಿ ವಶಕ್ಕೆ

ಯಾದಗಿರಿ: ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ನೀಡಬೇಕಾಗಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಗುಜರಾತ್ ರಾಜ್ಯಕ್ಕೆ ಸಾಗಿಸುತ್ತಿದ್ದುದನ್ನು ಪೆÇಲೀಸು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಿಠಕಲ್‍ನಿಂದ ಗುಜರಾತನ ಅಹ್ಮದಾಬಾದ್ ಕಡೆಗೆ ಅಕ್ಕಿ ಚೀಲಗಳನ್ನು ತುಂಬಿಕೊಂಡು ಶನಿವಾರ ಬೆಳ್ಳಂಬೆಳಿಗ್ಗೆ ಹೊರಟಿದ್ದ 3 ಲಾರಿಗಳನ್ನು ಭೀಮರಾಯನಗುಡಿ ಪೆÇೀಲಿಸರು ವಶಕ್ಕೆ ಪಡೆದಿದ್ದಾರೆ.

21 ಲಕ್ಷ ರೂ. ಮೌಲ್ಯದ 993 ಕ್ವಿಂಟಲ್ ಅಕ್ಕಿಯನ್ನು ಚೀಲಗಳಲ್ಲಿ ತುಂಬಿಕೊಂಡು ದುರುಳರು ಅಕ್ರಮವಾಗಿ ಸಾಗಿಸುತ್ತಿದ್ದರು.

ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಅಧಿಕಾರಿಗಳು ಹಾಗೂ ಪೆÇೀಲಿಸರು ಜಂಟಿಯಾಗಿ ದಾಳಿ ಮಾಡಿ ಲಾರಿಗಳನ್ನು ಜಪ್ತಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸಿಪಿಐ ಚನ್ನಯ್ಯ ಹಿರೇಮಠ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.

ಈ ಕುರಿತು ಭೀಮರಾಯನಗುಡಿ ಪೆÇೀಲಿಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.