ಕೋವಿಡ್ ಹೆಚ್ಚಾದರೆ ಶಾಲಾ ಕಾಲೇಜು ಬಂದ್ -ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲಾಕಾಲೇಜುಗಳನ್ನು ಮುಚ್ಚಲು ತೀರ್ಮಾನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯದ ಕೆಲವು ವಸತಿ ಶಾಲೆಗಳಲ್ಲಿ ವಿಧ್ಯಾರ್ಥಿಗಳಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿರುವುದರಿಂದ ಪೆÇೀಷಕರಿಗೆ ಆತಂಕ ಉಂಟು ಮಾಡಿದೆ ಎಂದರು.

ಹಾಗಾಗಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾದರೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಲೇಬೇಕಾಗುತ್ತದೆ. ಈ ಕುರಿತು ಈಗಾಗಲೇ ನಾನು ಶಿಕ್ಷಣ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.

ನವೋದಯ, ವಸತಿ ಶಾಲೆಗಳು, ಬಾಲಕಿಯರ ವಸತಿ ಶಾಲೆಗಳು, ಕಾಲೇಜುಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದು ಸ್ವಲ್ಪ ಆತಂಕ ತಂದಿದೆ. ಆದರೂ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಹಿಂದೆ ಕಾಣಿಸಿಕೊಂಡಿದ್ದ 2ನೇ ಅಲೆಯಷ್ಟು ಈ ಸೋಂಕು ಅಷ್ಟೊಂದು ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ ಆದ್ದರಿಂದ ಯಾರೊಬ್ಬರು ಆತಂಕಪಡಬೇಕಾದ ಅಗತ್ಯವಿಲ್ಲ. ಮಕ್ಕಳ ಹಿತದೃಷ್ಟಿಯನ್ನು ಕಾಪಾಡಲು ಸರ್ಕಾರ ಬದ್ದವಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಖುದ್ದು ಶಾಲೆ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಬೇಕೆಂದು ಸೂಚಿಸಿದ್ದೇನೆ. ಎರಡು ದಿನಗಳ ನಂತರ ನಾನೇ ರಾಜ್ಯದ ಕೆಲವು ಶಾಲಾಕಾಲೇಜುಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದರು.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸುತ್ತೇವೆ. ಈ ಬಾರಿ ಮಕ್ಕಳಲ್ಲಿ ಸೋಂಕು ತಡೆಗಟ್ಟಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದರೆ ಪರೀಕ್ಷೆ ಸೇರಿದಂತೆ ಭೌತಿಕ ತರಗತಿಗಳನ್ನು ನಿಲ್ಲಿಸಲು ಸರ್ಕಾರ ಸಿದ್ಧವಿದೆ. ಮಕ್ಕಳ ಆರೋಗ್ಯವೇ ಮುಖ್ಯ. ಯಾರೂ ಆತಂಕಕ್ಕೆ ಒಳಗಾಗುವುದು ಎಂದು ಸಚಿವರು ಮನವಿ ಮಾಡಿದರು.