ಹುಬ್ಬಳ್ಳಿ: ಹವಾಮಾನ ವೈಪರೀತ್ಯದಿಂದಾಗಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿ ಕೆಲ ಕಾಲ ಆತಂಕದ ವಾತಾವರಣ ಉಂಟಾಯಿತು.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಬೆಳಗ್ಗೆ 7.30ಕ್ಕೆ ಬಂದಿಳಿಯಬೇಕಿದ್ದ ವಿಮಾನಕ್ಕೆ ಹುಬ್ಬಳ್ಳಿಯಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಹೀಗಾಗಿ ಮೂರು ಸುತ್ತು ಆಕಾಶದಲ್ಲೇ ಸುತ್ತಿದರೂ ಲ್ಯಾಂಡಿಂಗ್ ಆಗಲು ಸಾಧ್ಯವಾಗಲಿಲ್ಲ.
ಇಂಡಿಗೊ ಸಂಸ್ಥೆಗೆ ಸೇರಿದ 6ಇ7227 ವಿಮಾನದಲ್ಲಿ ಸಿಎಂ ಹಾಗೂ ಕೇಂದ್ರ ಸಚಿವರು ಬರುತ್ತಿದ್ದರು.
ದಟ್ಟ ಮಂಜಿನಿಂದ ಕ್ಲಿಯರನ್ಸ್ ಸಿಗದೇ 26 ನಿಮಿಷದ ಬಳಿಕ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿಯಿತು. ನಂತರವೆ ಎಲ್ಲರೂ ನಿಟ್ಟುಸಿರು ಬಿಟ್ಟರು.