ಡ್ರಗ್ಸ್ ದಂಧೆ: ಅಕುಲ್ ಬಾಲಾಜಿ ಸೇರಿ ಮೂವರಿಗೆ ನೋಟೀಸ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೆÇಲೀಸರು ನಟ ಮತ್ತು ನಿರೂಪಕ ಅಕುಲ್‍ಬಾಲಾಜಿ ಸೇರಿ ಮೂರು ಮಂದಿಗೆ ನೋಟೀಸ್ ನೀಡಿದ್ದಾರೆ.
ಅಕುಲ್ ಬಾಲಾಜಿ, ಆರ್.ವಿ.ಯುವರಾಜ್ ಮತ್ತು ಸಂತೋಷ್ ಕುಮಾರ್ ಗೆ ಸಿಸಿಬಿ ನೋಟಿಸ್ ನೀಡಿದೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗುವಂತೆ ಈ ಮೂವರಿಗೆ ನೀಡಲಾಗಿರುವ ನೋಟಿಸ್‍ನಲ್ಲಿ ತಿಳಿಸಲಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ 12 ಮಂದಿಯನ್ನು ಬಂಧಿಸಲಾಗಿದೆ. ತಾರಾ ದಂಪತಿ ದಿಗಂತ್ ಮತ್ತು ಐಂದ್ರಿತಾ ರೇ ಅವರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ.