ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ರಾತ್ರಿ ಅಮಿತ್ ಶಾ ಅವರಿಗೆ ಉಸಿರಾಟದ ತೊಂದರೆ ಆದ ಕಾರಣ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದೆ.
ಸೋಮವಾರದಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ.
ಅಮಿತ್ ಶಾರಿಗೆ ಕೋವಿಡ್ ಸೋಂಕು ತಗುಲಿದ ಹಿನ್ನಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ಆ. 2ರಂದು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಆ. 14ರ ನಂತರ ಅವರು ಹೋಂ ಐಸೋಲೇಷನ್‍ನಲ್ಲಿ ಇದ್ದರು. ಆ ನಂತರ ಅವರಿಗೆ ಕೊರೊನಾ ನೆಗೆಟಿವ್ ವರದಿ ಬಂದಿತ್ತು.
ಶನಿವಾರ ರಾತ್ರಿ ಅಮಿತ್ ಶಾ ಅವರಿಗೆ ಉಸಿರಾಟದ ಸಮಸ್ಯೆ ಉಂಟಾದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.