ಮಂಗಳೂರು: ಕೋವಿಡ್ ನಡುವೆಯೂ ಶೈಕ್ಷಣಿಕ ಚಟುವಟಿಕೆಗಳು ರಾಜ್ಯದಲ್ಲಿ ಆ. 23ರಿಂದ 9 ರಿಂದ 12ನೇ ತರಗತಿವರೆಗೆ ಶಾಲೆ-ಕಾಲೇಜುಗಳನ್ನು ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳೂರಿನಲ್ಲಿ ಗುರುವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೂಂದಿಗೆ ಮಾತನಾಡಿದರು.
ಆ. 23ರಿಂದ 9 ರಿಂದ 12 ತರಗತಿವರೆಗೆ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು. ತಜ್ಞರ ಸಲಹೆಯಂತೆ ಬ್ಯಾಚ್ʼವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದರು.