ರಾಮನಗರ: ಹುಬ್ಬಳ್ಳಿ-ಧಾರವಾಡ ಮಾದರಿಯಲ್ಲಿ ರಾಮನಗರ ಮತ್ತು ಚನ್ನಪಟ್ಟಣವನ್ನು ಅವಳಿ ನಗರವಾಗಿ ಅಭಿವೃದ್ಧಿ ಮಾಡಲಾಗುವುದೆಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿದರು.
ಹೆಚ್ ಡಿಕೆ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಮನಗರ ಮತ್ತು ಚನ್ನಪಟ್ಟಣವನ್ನು ಅವಳಿ ನಗರವಾಗಿ ಮಾಡಿ ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆಯಾಗಿ ಮಾಡಲಾಗುವುದು ಎಂದು ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದರು.
ರಾಮನಗರ ಮತ್ತು ಚನ್ನಪಟ್ಟಣ ಎರಡೂ ನನ್ನ ಎರಡು ಕಣ್ಣುಗಳು ಎಂದು ಹೆಚ್ ಡಿಕೆ ಹೇಳಿದರು.
ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗೋದು ರಾಮನಗರದಲ್ಲೇ. ರಾಮನಗರ ಜಿಲ್ಲೆ ಬಿಟ್ಟು ನಾನು ಹೊರಗೆ ಹೋಗಲ್ಲ. ನಾನು ಎಂದಿಗೂ ಚನ್ನಪಟ್ಟಣ ಕ್ಷೇತ್ರ ಬಿಡಲ್ಲ. ಕೆಲವರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರ ಬಿಡುವುದಿದ್ದರೆ ನಾನು ಚನ್ನಪಟ್ಟಣದಲ್ಲಿ ಯಾಕೆ ಓಡಾಡುತ್ತಿದ್ದೆ ಎಂದರು.
ರಾಮನಗರದಿಂದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸ್ಪರ್ಧೆ ಮಾಡುವ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಯಾರು ಬೇಕಾದರೂ ಬಂದು ಸ್ಪರ್ಧೆ ಮಾಡಲಿ. ನನ್ನ ವಿರೋಧವಿಲ್ಲ ಎಂದು ಹೇಳಿದರು.