ಲಕ್ನೊ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿನ 32 ಮಂದಿ ಆರೋಪಿಗಳೂ ನಿದೋರ್ಶಿಗಳು ಎಂದು ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.
ಎಲ್. ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸೇರಿದಂತೆ 32 ಮಂದಿ ಆರೋಪಿಗಳು ದೋಷ ಮುಕ್ತರು, ನಿರ್ದೋಷಿಗಳು ಎಂದು ಲಕ್ನೊ ಸಿಬಿಐನ ವಿಶೇಷ ಕೋರ್ಟ್ ತೀರ್ಪು ನೀಡಿದೆ.
ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ. ಆಕಸ್ಮಿಕವಾಗಿ ನಡೆದ ಘಟನೆ ಎಂದು ಲಕ್ನೊ ವಿಶೇಷ ಸಿಬಿಐ ನ್ಯಾಯಾಲಯದ ಕೋರ್ಟ್ ನ್ಯಾಯಾಧೀಶರಾದ ಎಸ್. ಕೆ. ಯಾದವ್ ಮಹತ್ವದ ತೀರ್ಪು ನೀಡಿದ್ದಾರೆ.
ಆರೋಪಿಗಳ ವಿರುದ್ಧ ಪೂರ್ವ ಪ್ರಬಲ ಸಾಕ್ಷಿಗಳಿಲ್ಲ ಎಂದು ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸಿದ್ದಾರೆ.
28 ವರ್ಷಗಳ ದೀರ್ಘ ಕಾಲದ ಕಾನೂನು ಹೋರಾಟಕ್ಕೆ ಇಂದು ತಾತ್ವಿಕ ಅಂತ್ಯ ಸಿಕ್ಕಂತಾಗಿದೆ.