ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸೆ. 30ಕ್ಕೆ ತೀರ್ಪು

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಸೆ. 30ರಂದು ಪ್ರಕಟಿಸಲಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಣೆ ದಿನದಂದು ಎಲ್ಲಾ ಆರೋಪಿಗಳು ಕೋರ್ಟ್ ನಲ್ಲಿ ಹಾಜರಿರಬೇಕು ನ್ಯಾಯಾಧೀಶರು ಸೂಚಿಸಿದ್ದಾರೆ.
ಲಕ್ನೋದ ಸಿಬಿಐನ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಕೆ. ಯಾದವ್ ಅವರು ಬುಧವಾರ (ಸೆ. 16) ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ದಿನಾಂಕವನ್ನು ನಿಗಧಿಪಡಿಸಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ, ಎಂ ಎಂ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ ಸೇರಿದಂತೆ 32 ಮಂದಿ ಆರೋಪಿಗಳು ಭಾಗಿಯಾಗಿದ್ದಾರೆ.
1992ರ ಡಿಸೆಂಬರ್ 6ರಂದು ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಕರಸೇವಕರು ಧ್ವಂಸಗೊಳಿಸಿದ್ದರು.
28 ವರ್ಷಗಳ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸೆ. 30ರಂದು ಹೊರ ಬೀಳಲಿದೆ.