ಹಾವೇರಿ: ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ದ ಕದಡಿದ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕøರಿಸಿದೆ.
ತನ್ನ ಫೇಸ್‍ಬುಕ್ ಖಾತೆಯಲ್ಲಿ ಶ್ರೀರಾಮ ದೇವರ ಭಾವಚಿತ್ರಕ್ಕೆ ಅವಹೇಳನ ಮಾಡುವ ಪೆÇೀಸ್ಟ್ ಮಾಡಿದ ಆರೋಪಿ ಶಿಗ್ಗಾಂವ ತಾಲೂಕು ಹುಲಗೂರ ಗ್ರಾಮದ ಮಹ್ಮದಸಾಧಿಕ ಹಜರೇಸಾಬ ಎಂಬಾತನಿಗೆ ಶಿಗ್ಗಾಂವ ಪ್ರಧಾನ ಸಿವಿಲ್ ಜಡ್ಜ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಶ್ರೀದೇವಿ ಇ. ದರಬಾರೆ ಅವರು ಜಾಮೀನು ಅರ್ಜಿ ತಿರಸ್ಕರಿಸಿ ತೀರ್ಪು ನೀಡಿದ್ದಾರೆ.
ಆರೋಪಿಯು ಇದೇ ಆ. 14ರಂದು ತನ್ನ ಫೇಸ್‍ಬುಕ್ ಖಾತೆಯಲ್ಲಿ ಮತಿಯ ಭಾವನೆಗಳಿಗೆ ದಕ್ಕೆಯುಂಟುಮಾಡುವ ಸಂದೇಶವನ್ನು ತನ್ನ ಫೇಸ್‍ಬುಕ್ ಖಾತೆಯಲ್ಲಿ ಶೇರ್ ಮಾಡಿದ ಹಿನ್ನೆಲೆಯಲ್ಲಿ ಶಿಗ್ಗಾಂವ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಪಡಿಸಲಾಗಿತ್ತು.
ಆರೋಪಿ ಜಾಮೀನು ಕೋರಿ ಶಿಗ್ಗಾಂವ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದ.
ಈ ಕುರಿತಂತೆ ನ್ಯಾಯಾಧೀಶರು ಎರಡು ಕಡೆಯ ವಾದವಿವಾದವನ್ನು ಆಲಿಸಿ ಜಾಮೀನು ಅರ್ಜಿ ತಿರಸ್ಕರಿಸಿ ತೀರ್ಪು ನೀಡಿದ್ದಾರೆ.
ಆರೋಪಿ ನ್ಯಾಯಾಂಗ ಬಂಧನದಲ್ಲಿರುತ್ತಾನೆ ಎಂದು ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಯಳವತ್ತಿ ಅವರು ತಿಳಿಸಿದ್ದಾರೆ.