ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಡ್ರಗ್ಸ್ ದಂಧೆಯಲ್ಲಿ ಸೆರೆಯಾಗಿರುವ ನಟಿ ರಾಗಿಣಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆ. 19ಕ್ಕೆ ಮುಂದೂಡಿದೆ.
ನ್ಯಾಯಾಂಗ ಬಂಧನದಲ್ಲಿರುವ ರಾಗಿಣಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ (ಸೆ. 16) ಮುಂದೂಡಲಾಗಿತ್ತು.
ಆದರೆ ಸಿಸಿಬಿ ಪೊಲೀಸರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕೇಳಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 19ಕ್ಕೆ ಮುಂದೂಡಿದೆ.