ಮಂಗಳೂರು: ರಾಜಧಾನಿ ಬೆಂಗಳೂರಿನಿಂದ ಹೊರಗೆ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ದೊಡ್ಡ ಪ್ರಯತ್ನ ಮಾಡುತ್ತಿರುವ ರಾಜ್ಯ ಸರಕಾರವು ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್ ಆಗಿ ಗುರುತಿಸಿದೆ ಎಂದು ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಮಂಗಳೂರಿನಲ್ಲಿ ಬುಧವಾರ ನಡೆದ ಮಂಗಳೂರು ಆವಿμÁ್ಕರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರು ಐಟಿ ನಗರವಾಗಿ ಬೆಳೆದಿದೆ. ಇದೀಗ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಮಂಗಳೂರನ್ನು ಉದಯೋನ್ಮುಖ ತಂತ್ರಜ್ಞಾನ ಕ್ಲಸ್ಟರ್ ಆಗಿ ಗುರುತಿಸಿದ್ದು, ಅದನ್ನು ವೇಗಗತಿಯಲ್ಲಿ ಮುಂದಕ್ಕೆ ಕೊಂಡಯ್ಯಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ಐಟಿ ಉದ್ಯಮಗಳ ನೆಲೆಯಾಗುವುದರ ಜತೆಗೆ, ನವೋದ್ಯಮಗಳ ತಾಣವಾಗಿಯೂ ಮಂಗಳೂರು ಹೊರಹೊಮ್ಮಲಿದೆ. ಅದಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದು ಡಿಸಿಎಂ ಹೇಳಿದರು.
ಉತ್ತಮ ಪರಿಸರ, ಪ್ರವಾಸೋದ್ಯಮ, ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆ ಮುಂತಾದ ಪೂರಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮಂಗಳೂರು ನಗರವನ್ನು ಆವಿμÁ್ಕರ ಹಾಗೂ ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ರೂಪಿಸಲಾಗುವುದು ಎಂದರು ಡಿಸಿಎಂ.
ಐಟಿ ಉದ್ಯಮದ ಜತೆಗೆ ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಮತ್ತು ಅಭಿವೃದ್ಧಿ ನಿರ್ವಹಣೆ ಕ್ಷೇತ್ರದಲ್ಲೂ ಮಂಗಳೂರು ನಗರವನ್ನು ಪ್ರಮುಖ ಕ್ಲಸ್ಟರ್ ಆಗಿ ನಾವು ಪರಿಗಣಿಸಿದ್ದೇವೆ. ಅಲ್ಲದೆ, ಬೆಂಗಳೂರು ಹೊರಗಿನ ನಮ್ಮ ಯೋಜನೆಗಳ ಮುಖ್ಯ ಭಾಗವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ರಾಜ್ಯದ ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಇಲಾಖೆಗಳು ರಾಜ್ಯಾದ್ಯಂತ ಆವಿμÁ್ಕರ ಹಬ್‍ಗಳನ್ನು ಸ್ಥಾಪಿಸುತ್ತಿವೆ. ಈ ಪಟ್ಟಿಯಲ್ಲಿ ಮಂಗಳೂರು ಕೂಡ ಇದೆ ಎಂದರು ಉಪ ಮುಖ್ಯಮಂತ್ರಿ.
ಇದರ ಜತೆಗೆ ಮಂಗಳೂರು ಸೇರಿದಂತೆ ರಾಜ್ಯದ ಐದು ನಗರಗಳಲ್ಲಿ ಸಿಐಎಫ್ ವ್ಯವಸ್ಥೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಶಿವಮೊಗ್ಗ, ಬೆಳಗಾವಿ, ಮೈಸೂರು ಹಾಗೂ ಬೆಂಗಳೂರು ನಗರಗಳೂ ಇವೆ. ವ್ಯವಸ್ಥೆಯೂ ಕ್ಲಸ್ಟರ್‍ಗಳ ಅಭಿವೃದ್ಧಿಗೆ ಪೂರಕವಾಗ ಕೆಲಸ ಮಾಡುತ್ತವೆ ಎಂದು ಡಿಸಿಎಂ ತಿಳಿಸಿದರು.
ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಅವರು, ರಾಜ್ಯ ಕರಾವಳಿಯ ಮಹತ್ವದ ನಗರವಾದ ಮಂಗಳೂರಿನಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿಯಾಗಬೇಕು, ಉದ್ಯಮಗಳು ಬರಬೇಕು, ಆರ್ಥಿಕ ಚಟುವಟಿಕೆಗಳು ಹೆಚ್ಚಬೇಕು. ಆದರೆ, ಇವೆಲ್ಲವೂ ಮಂಗಳೂರಿನ ಸಂಸ್ಕೃತಿ ಮತ್ತು ಪರಂಪರೆಗೆ ಧಕ್ಕೆಯಾಗದಂತೆ ಆಗಬೇಕು ಎಂದು ಸಲಹೆ ಮಾಡಿದರು.
ಬೆಂಗಳೂರು ಸಾಕಷ್ಟು ಅಭಿವೃದ್ಧಿಯಾಗಿದೆ. ಆದರೆ, ಅಲ್ಲಿ ಮೂಲ ನಿವಾಸಿಗಳನ್ನು ಹುಡಕಬೇಕಾಗಿದೆ. ಅಲ್ಲಿ ಅಪ್ಪಟ ಕನ್ನಡಿಗರನ್ನು ಬಿಟ್ಟು ಉಳಿದ ಎಲ್ಲರೂ ತುಂಬಿಹೋಗಿದ್ದಾರೆ. ಮಂಗಳೂರಿಗೆ ಇಂಥ ಸ್ಥಿತಿ ಬರಬಾರದು. ಮಂಗಳೂರಿಗರನ್ನು ಉಳಿಸಿಕೊಂಡೇ ಮಂಗಳೂರು ಬೆಳೆಯಬೇಕು ಎಂದು ಕಟೀಲ್ ಅವರು ಹೇಳಿದರು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಐಟಿ ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಸಿಸಿಐ ಅಧ್ಯಕ್ಷ ಸ್ಟೀವನ್ ಡೇವಿಡ್, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ಸಿದ್ದರಾಮಪ್ಪ ಮುಂತಾದವುರ ಸಮಾವೇಶದಲ್ಲಿ ಭಾಗಿಯಾಗಿದ್ದರು. ಬಳಿಕ ಕೆಲವಾರು ವಿಚಾರ ಕುರಿತು ಚರ್ಚಾಗೋಷ್ಠಿಗಳು ನಡೆದವು.