ಹುಬ್ಬಳ್ಳಿ: ಡ್ರಗ್ಸ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರಾಭಿವೃದ್ಧ ಖಾತೆ ಸಚಿವ ಬೈರತಿ ಬಸವರಾಜ್ ಹೇಳಿದರು.
ನಗರದಲ್ಲಿ ಭಾನುವಾರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಈ ಪ್ರಕರಣದಲ್ಲಿ ಯಾವುದೇ ರಾಜಕೀಯ ವ್ಯಕ್ತಿಗಳಿದ್ದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದ ಅವರು ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪತ್ತೆ ಪ್ರಕರಣ
ಬೇಸರದ ವಿಷಯವಾಗಿದೆ ಎಂದು ಹೇಳಿದರು
ಸಚಿವ ಬಿ.ಎ.ಬಸವರಾಭಾನುವಾರ ಬೆಳಗ್ಗೆ ಸಿಟಿ ರೌಂಡ್ಸ್ ನಡೆಸಿದ ಸಚಿವ ಬೈರತಿ ಬಸವರಾಜ್ ಅವರು ಹುಬ್ಬಳ್ಳಿಯ ಗೋಕುಲ ರಸ್ತೆಯ ಎಂ.ಎಸ್.ಎಂ.ಇ. ಇಂಡಸ್ಟ್ರಿಯಲ್ ಏರಿಯಾ, ಕಾಟನ್ ಮಾರುಕಟ್ಟೆಯ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಎಂ.ಜಿ.ಪಾರ್ಕ್, ಚಿಟಗುಪ್ಪಿ ಆಸ್ಪತ್ರೆ, ಮೀನಿನ ಮಾರುಕಟ್ಟೆಗೆ ಭೇಟಿ ನೀಡಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ವೀಕ್ಷಣೆ ಮಾಡಿ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾದಾನ ವ್ಯಕ್ತಪಡಿಸಿದರು.