ಬೆಳಗಾವಿ: ಹೊಸ ವರ್ಷದ ಸಂಭ್ರಮದಲ್ಲಿರುವಾಗಲೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಪುಂಡರು ಪುಂಡಾಟ ಮೆರೆದಿದ್ದು,ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಈ ಘಟನೆ ನಡೆದಿದೆ.
ಇಲ್ಲಿ ಕಟ್ಟಿದ್ದ ನಾಡಧ್ವಜಕ್ಕೆ ರಾತ್ರೋರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಕನ್ನಡಿಗರನ್ನು ಕೆರಳಿಸಿದ್ದಾರೆ.
ಪುಂಡರ ಈ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,ತಕ್ಷಣ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.