ಎಷ್ಟೇ ಕಷ್ಟ ಎದುರಾದರೂ ಎದುರಿಸಲು ಸಿದ್ಧ -ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ: ಎಷ್ಟೇ ಕಷ್ಟ ಎದುರಾದರೂ ನಿಮಗಾಗಿ ನಾನು ಎದುರಿಸಲು ಸಿದ್ಧ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಸುಳೇಭಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ 50 ಲಕ್ಷ ರೂ. ವೆಚ್ಚದಲ್ಲಿ 4 ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಒಳ್ಳೆಯ ಕೆಲಸ ಮಾಡುವವರಿಗೆ ನೂರೆಂಟು ವಿಘ್ನಗಳು ಬರುವುದು ಸಹಜ. ಇದನ್ನು ಸಹಿಸದವರಿಂದ ನಿತ್ಯ ಸಂಕಷ್ಟ, ಎದುರಾಗುತ್ತಿದೆ. ಆದರೆ ನನ್ನ ಕ್ಷೇತ್ರದ ಜನರಿಗಾಗಿ ನಾನು ಎಲ್ಲವನ್ನೂ ಸಹಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.
ನಾನು ಶಾಸಕಿ ಆದ ನಂತರ ನನಗೆ ಇಷ್ಟೊಂದು ಸಂಕಷ್ಟ ಎದುರಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ನಿರಾತಂಕವಾಗಿ ಜನರ ಕೆಲಸವನ್ನು ಮಾಡಿಕೊಂಡು ಹೋಗಬಹುದು ಎಂದುಕೊಂಡಿದ್ದೆ. ಆದರೆ ಜನರಿಗಾಗಿ ಕೆಲಸ ಮಾಡುವುದನ್ನೂ ಸಹಿಸಿಕೊಳ್ಳದಿದ್ದರೆ ನಾನೇನು ಮಾಡಲು ಸಾಧ್ಯ ಎಂದವರು ಪ್ರಶ್ನಿಸಿದರು.
ಕ್ಷೇತ್ರದ ಹೊನ್ನಿಹಾಳ ಗ್ರಾಮದ ಒಳಾಂಗಣ ಕಾಂಕ್ರೀಟ್ ರಸ್ತೆಯ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು.