ಬೆಳಗಾವಿ: ಕಳೆದ ವರ್ಷ ಮಹಾಮಾರಿ ಕೊರೊನಾ ವೈರಸ್ ಲಾಕ್ ಡೌನ್ ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಂಗಳವಾರ ಹೇಳಿದರು.
ಖಾನಾಪುರದ ಶಾಲೆಗೆ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಭೇಟಿ ನೀಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.
ಕಳೆದುಹೋದ ಸಮಯವನ್ನು ಸರಿದೂಗಿಸಲು ಮತ್ತು ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಳಂಬವಾಗುವುದನ್ನು ತಡೆಯಲು, ಶಿಕ್ಷಣ ಇಲಾಖೆಯು ರಜಾದಿನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಯೋಜನೆಯನ್ನು ರೂಪಿಸುತ್ತಿದೆ ಎಂದು ಸಚಿವರು ತಿಳಿಸಿದರು.