ಬೆಂಗಳೂರು: ಜನ ವಿರೋಧಿ ಕಾಯ್ದೆಗಳಿಗೆ ರಾಜ್ಯಪಾಲರು ಸಹಿ ಹಾಕಬಾರದು ಎಂದು ಮನವಿ ಸಲ್ಲಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ನೂತನ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವ ವಿಚಾರ ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿರುವುದಾಗಿ ಡಿಕೆಶಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಜನ ವಿರೋಧಿ ಕಾಯ್ದೆಗಳನ್ನು ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
ರಾಜ್ಯಪಾಲರಿಗೆ ಎರಡು ಮನವಿ ಸಲ್ಲಿಸಿದ್ದೇವೆ ಎಂದು ಡಿಕೆಶಿ ತಿಳಿಸಿ, ರೈತ ವಿರೋಧಿ ಕಾಯ್ದೆ ಇಲ್ಲದೆ ರಾಜ್ಯವನ್ನು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲವೇ ಎಂದವರು ಪ್ರಶ್ನಿಸಿ, ಕೇಂದ್ರ ಸರ್ಕಾರ ನಮ್ಮ ಮೇಲೆ ಒತ್ತಡ ಹೇರಲು ಮೂರು ಕಾನೂನು ತಂದಿದೆ ಎಂದರು.
ಕಾಂಗ್ರೆಸ್ ರೈತರ ಪರ ನಿಂತು ಭೂಸುಧಾರಣೆ, ಎಪಿಎಂಸಿ, ಕೈಗಾರಿಕೆಗಳ ವಿವಾದ, ಕಾರ್ಮಿಕ ಕಾಯ್ದೆಗಳ ವಿರುದ್ಧ ಹೋರಾಟಕ್ಕೆ ಇಳಿದಿದೆ ಎಂದು ಅವರು ಹೇಳಿದರು.