ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಟ್ರಾನ್ಸ್ ಫರ್ ದಂಧೆಯಲ್ಲಿ ಕೋಟಿಗಟ್ಟಲೇ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.
ನಗರದಲ್ಲಿ ಬುಧವಾರ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ರಾನ್ಸ್ ಫರ್ ದಂಧೆಯಲ್ಲಿ ಕೋಟಿಗಟ್ಟಲೇ ವಸೂಲಿ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಹೇಳಿದರು.
ಸಿಎಂ ಪುತ್ರ ವಿಜಯೇಂದ್ರ ಅವರು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆಂದು ದೂರಿದ ಅವರು ಎಲ್ಲಾ ಇಲಾಖೆಗಳಲ್ಲೂ ಉಸ್ತುವಾರಿ ಮಾಡಿಕೊಂಡು ವಸೂಲು ದಂಧೆ ನಡೆಸುತ್ತಿದ್ದಾರೆಂದರು.
ಹಣ ವಸೂಲಿಗಾಗಿ 31 ಮಂದಿ ಕೂಟ ಕಟ್ಟಿಕೊಂಡಿದ್ದು, ಇವರುಗಳ ಚಲನವಲನ ಗಮನಿಸಿ, ದಾಖಲೆಗಳನ್ನು ಸಂಗ್ರಹಿಸಿದ್ದೇವೆ ಎಂದು ಹೇಳಿದ ಅವರು ಸೆ. 2 ಅಥವಾ 3ನೇವಾರದಂದು ದೆಹಲಿಯಲ್ಲಿ ವಿಡಿಯೋ, ಆಡಿಯೋ ಬಿಡುಗಡೆ ಮಾಡುವುದಾಗಿ ಲಕ್ಷ್ಮಣ್ ತಿಳಿಸಿದರು.
ವಿಜಯೇಂದ್ರ ಅಕ್ರಮದ ಬಗ್ಗೆ ಬಿಜೆಪಿ ಶಾಸಕರೇ ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ ಎಂದು ಅವರು ತಿಳಿಸಿ ಪತ್ರವನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.
ವಿಜಯೇಂದ್ರ 5 ಸಾವಿರ ಕೋಟಿ ರೂ. ಅವ್ಯವಹಾರ ಮಾಡಿದ್ದಾರೆಂದು ಆ ಪತ್ರದಲ್ಲಿ ಇದೆ. ಆ ಬಗ್ಗೆ ತನಿಖೆ ನಡೆಸಬೇಕೆಂದು ಲಕ್ಷ್ಮಣ್ ಒತ್ತಾಯಿಸಿದರು.