ಸಚಿವ ಸಿ.ಟಿ. ರವಿ ರಾಜೀನಾಮೆ

ಬೆಂಗಳೂರು: ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಸಿ.ಟಿ.ರವಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿಟಿ ರವಿ ಅವರು ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿಯಲ್ಲಿ ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಸಿಟಿ ರವಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.