ಕಾರು ಅಪಘಾತ: ನಾಲ್ಕು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

ಬೆಂಗಳೂರು: ಭೀಕರ ಅಪಘಾತದಲ್ಲಿ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟು ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಸಮೀಪ  ನಡೆದಿದೆ.

ಬುಧವಾರ ಮುಂಜಾನೆ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ  ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಮೃತರನ್ನು ವೈಷ್ಣವಿ, ಭರತ, ಸಿರಿಲ, ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ. ಶೀಕೃಷ್ಣ, ಅಂಕಿತಾ ರೆಡ್ಡಿ ಎಂಬುವರು ಗಂಭೀರ ಗಾಯಗೊಂಡಿದ್ದು ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರೆಲ್ಲರೂ ಗಾರ್ಡನ್ ಸಿಟಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎನ್ನಲಾಗಿದೆ.

ತಮಿಳುನಾಡು ಮೂಲದ ಕಾರಿನಲ್ಲಿ ಇವರೆಲ್ಲರು ಕೋಲಾರದ ನರಸಾಪುರ ಬಳಿ ಇರುವ‌ ಕೆಫೆ ಕಾಫಿ ಡೇ ಗೆ ಲಾಂಗ್ ಡ್ರೈವ್ ಹೋಗಿದ್ದರು.

ನಂತರ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‍ಗೆ ಡಿಕ್ಕಿ ಹೊಡೆದು ಪಕ್ಕಕ್ಕೆ ಹಾರಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ,ಸ್ಥಳಕ್ಕೆ ಹೊಸಕೋಟೆ ಸಿಪಿಐ ಮಂಜುನಾಥ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.