ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಬೆಳ್ಳಂಬೆಳಗ್ಗೆಯೇ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಡಿಕೆಶಿವಕುಮಾರ್ ನಿವಾಸದ ಮೇಲೆ ಸೋಮವಾರ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಗರದ ಸದಾಶಿವ ನಗರದ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ಮಾಡಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮುಂಬೈ, ದೆಹಲಿಯಲ್ಲಿಯೂ ಡಿಕೆಶಿ ಮತ್ತವರ ಸಹೋದರ ಸುರೇಶ್ ಅವರಗೆ ಸೇರಿದ ನಿವಾಸ, ಕಚೇರಿ ಸೇರಿದಂತೆ 14 ಸ್ಥಳಗಳ ಮೇಲೆ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.