ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಅವರ ರೆಸಾರ್ಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಆದಿತ್ಯ ಆಳ್ವಾ ಒಡೆತನದ ಬೆಂಗಳೂರಿನ ಹೆಬ್ಬಾಳದ ಬಳಿಯಿರುವ ಹೌಸ್ ಆಫ್ ಲೈಫ್ ರೆಸಾರ್ಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರೆಸಾರ್ಟ್ ನಲ್ಲಿ ಪಾರ್ಟಿಗಳು ನಡೆಯುತ್ತಿದ್ದವು ಎಂಬ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿ ಅಂಜುಮಾಲಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ರೆಸಾರ್ಟ್ ಮ್ಯಾನೇಜರ್ ರಾಮದಾಸ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಡ್ರಗ್ ಕೇಸ್ ನಲ್ಲಿ ಆದಿತ್ಯ ಆಳ್ವಾ 6ನೇ ಆರೋಪಿ.