ಸಿನಿಮಾ, ಟಿವಿ ಚಿತ್ರೀಕರಣ ಮರು ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ನವದೆಹಲಿ: ಸಿನಿಮಾ ಹಾಗೂ ಟಿವಿ ಕಾರ್ಯಕ್ರಮಗಳ ಚಿತ್ರೀಕರಣಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಈ ಕುರಿತು ಮಾರ್ಗಸೂಚಿಯನ್ನು ಭಾನುವಾರ ಪ್ರಕಟಿಸಿದ್ದಾರೆ.
ಅಭಿನಯಿಸುವವರು ಅಲ್ಲದೇ, ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಆರೋಗ್ಯ ಸೇತು ಆ್ಯಪ್ ನ್ನು ಬಳಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಮಾರ್ಗಸೂಚಿ ಬಿಡುಗಡೆಯಿಂದ ಸಿನಿಮಾ, ಟಿವಿ ಧಾರವಾಹಿಗಳು ಪುನರ್ ಆರಂಭಗೊಳ್ಳುವುದರೊಂದಿಗೆ ಉದ್ಯೋಗವಕಾಶಗಳು ಸೃಷ್ಟಿಯಾಗುವ ಭರವಸೆ ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.