ಬೆಂಗಳೂರು: ಸಭೆ, ಸಮಾರಂಭಗಳಲ್ಲಿ ಹೂಗುಚ್ಛ ನೀಡುವುದನ್ನು ನಿಷೇಧಿಸಿ ಸರಕಾರ ಆದೇಶ ಹೊರಡಿಸಿದೆ.
ಈ ಆದೇಶವನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಮಂಗಳವಾರ ಹೊರಡಿಸಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲು, ನೆನಪಿನ ಕಾಣಿಕೆಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು.
ಸಿಎಂ ಅವರು ಹಾರ, ಶಾಲುಗಳನ್ನು ಹಾಕುವುದು ಬೇಡ ಹೇಳಿದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು.
ಇನ್ನು ಮುಂದೆ ಹೂ ಗುಚ್ಚ, ಹಾರ, ಶಾಲು ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಆದೇಶದಂತೆ ಇನ್ನು ಮುಂದೆ ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಶಾಲು, ಹಣ್ಣಿನ ಬುಟ್ಟಿ, ನೆನಪಿನ ಕಾಣಿಕೆ ಇರುವುದಿಲ್ಲ. ಎಲ್ಲ ಇಲಾಖೆಗಳು ಈ ಆದೇಶವನ್ನು ಚಾಚೂ ತಪ್ಪದೇ ಪಾಳಿಸಬೇಕು ಎಂದು ಸೂಚಿಸಲಾಗಿದೆ.
ವಿಶೇಷವೆಂದರೆ, ಇಂಧನ ಖಾತೆಯ ನೂತನ ಸಚಿವ ಸುನೀಲ್ ಕುಮಾರ್ ಅವರು ಹೂಗುಚ್ಛ ಅಥವಾ ಹಾರ ಹಾಕುವ ಬದಲು ಕನ್ನಡ ಪುಸ್ತಕ ನೀಡಿ ಎಂದು ಮನವಿ ಮಾಡಿದ್ದರು. ಆ ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡುವುದಾಗಿ ಅವರು ತಿಳಿಸಿದ್ದರು.
80 ಕೋಟಿ ರೂ. ಬೆಲೆ 80 ಕೆಜಿ ತಿಮಿಂಗಿಲ ವಾಂತಿ ವಶ: ಐವರು ಸಿಸಿಬಿ ಬಲೆಗೆ
ಬೆಂಗಳೂರು: ನಿಷೇಧಿತ ತಿಮಿಂಗಿಲದ ವಾಂತಿಯ ಗಟ್ಟಿ ಅಥವಾ ಅಂಬರ್ ಗ್ರೀಸ್ ಮಾರಾಟ ಮಾಡುತ್ತಿದ್ದ ಖತರ್ನಾಕ್ ಜಾಲವೊಂದನ್ನು ಬೇಧಿಸಿರುವ ನಗರದ ಸಿಸಿಬಿ ಪೊಲೀಸರು, ಸುಮಾರು 80 ಕೋಟಿ ರೂ.ಗಳಿಗೂ ಹೆಚ್ಚು ಬೆಲೆ ಬಾಳುವ 80 ಕೆಜಿಯಷ್ಟು ಅಂಬರ್ ಗ್ರೀಸ್ ಅನ್ನು ವಶಪಡಿಸಿಕೊಂಡಿದ್ದಾರೆ.