ಬೆಂಗಳೂರು: ಕರ್ನಾಟಕದ ಮೊದಲ ರೋ-ರೋ (ರೋಲ್ ಆನ್-ರೋಲ್ ಆಫ್) ರೈಲು ಸೇವೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭಾನುವಾರ ಚಾಲನೆ ನೀಡಿದರು.
ಬೆಂಗಳೂರಿನ ನೆಲಮಂಗಲದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ ಆನ್-ರೋಲ್ ಆಫ್ ರೈಲು (ರೋ-ರೋ ರೈಲು) ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.
ನೈಋತ್ಯ ರೈಲ್ವೆ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ರೋ-ರೋ ಸೇವೆ ಆರಂಭಿಸಲಾಗಿದೆ.
ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ರಾಜ್ಯಸಚಿವ ಸುರೇಶ್ ಅಂಗಡಿ, ಕಂದಾಯ ಸಚಿವ ಆರ್. ಅಶೋಕ್, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಉಪಸ್ಥಿತರಿದ್ದರು.