ಕೃಷಿ, ಭೂ ಸುಧಾರಣಾ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನ

ಬೆಂಗಳೂರು: ಕೃಷಿ, ಭೂ ಸುಧಾರಣಾ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳ್ಳಲಾಗಿದೆ.
ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ವಿಧಾನಸಭೆ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ಅಂಗೀಕರಿಸಲಾಗಿತ್ತು.
ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ಪರಿಷತ್ ನಲ್ಲಿ ಇನ್ನೂ ಅಂಗೀಕಾರಗೊಂಡಿಲ್ಲ.
ಆದರೆ ಕಾರ್ಮಿಕ ತಿದ್ದುಪಡಿ ಕಾಯ್ದೆ ಪರಿಷತ್ ನಲ್ಲಿ ಸೋಲಾಗಿತ್ತು.
ಹಾಗಾಗಿ ಈ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೊರೆ ಹೋಗಿದೆ.