ಚಾಮರಾಜನಗರ ಜಿಲ್ಲೆ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊರೊನಾ

ಚಾಮರಾಜನಗರ: ಶಾಲಾ-ಕಾಲೇಜು ಆರಂಭಕ್ಕೆ ಕೆಲ ದಿನಗಳು ಇರುವಾಗ ಚಾಮರಾಜನಗರ ಜಿಲ್ಲೆಯಲ್ಲಿ 15 ಮಂದಿ ನರ್ಸಿಂಗ್ ವಿದ್ಯಾರ್ಥಿನಿಯರಲ್ಲಿ ಕೊರೊನಾ ಸೋಂಕು ಪತ್ತೆ ಆಗಿದೆ.
ಕೊಳ್ಳೇಗಾಲ ತಾಲೋಕು ಹೋಲಿಕ್ರಾಸ್ ಆಸ್ಪತ್ರೆಯ ನರ್ಸಿಂಗ್ ಸ್ಕೂಲ್ ನ ಹಾಸ್ಟೆಲ್ ನಲ್ಲಿ 130 ವಿದ್ಯಾರ್ಥಿನಿಯರಿದ್ದು ಈ ಪೈಕಿ 15 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿದೆ.
ಸೋಂಕಿತ ವಿದ್ಯಾರ್ಥಿನಿಯರನ್ನು ಹೋಲಿಕ್ರಾಸ್ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವಿದ್ಯಾರ್ಥಿನಿಯರ ಸಂಪರ್ಕದಲ್ಲಿದ್ದ ಉಳಿದ ವಿದ್ಯಾರ್ಥಿನಿಯರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಿಗೆ ಕೊರೊನಾ ಸೋಂಕು ಹರಡಿಲ್ಲ. ಮುಂಜಾಗ್ರತಾ ಕ್ರಮವಾಗಿ ಇವರನ್ನೆಲ್ಲಾ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಡಿ.ಹೆಚ್.ಓ. ಡಾ. ಎಂ. ಸಿ. ರವಿ ತಿಳಿಸಿದ್ದಾರೆ.