ಚಾಮರಾಜನಗರ: ನಗರದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆ ಸಾಮಥ್ರ್ಯವುಳ್ಳ 125 ಕೋಟಿ ರೂ. ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಬುಧವಾರ ಜಿಲ್ಲಾಧಿಕಾರಿ ಎಂ. ಆರ್. ರವಿ ಅವರು ಪರಿಶೀಲಿಸಿದರು.
ಆಸ್ಪತ್ರೆ ಕಟ್ಟಡದ ಪ್ರತಿ ಕಾಮಗಾರಿಯನ್ನು ವ್ಯಾಪಕವಾಗಿ ವೀಕ್ಷಿಸಿ ಗುಣಮಟ್ಟದ ಕೆಲಸ ನಿರ್ವಹಿಸುವಂತೆ ಸೂಚಿಸಿದರು.
ಆಸ್ಪತ್ರೆ ಕಟ್ಟಡದಲ್ಲಿ ನಿರ್ಮಾಣವಾಗುತ್ತಿರುವ ಹೊರರೋಗಿಗಳ ವಿಭಾಗ, ತುರ್ತು ನಿಗಾ ಘಟಕ, ಶಸ್ತ್ರ ಚಿಕಿತ್ಸೆ ಕೊಠಡಿಗಳು, ತೀವ್ರ ನಿಗಾ ಘಟಕ, ವಾರ್ಡುಗಳು, ಸಭಾಂಗಣ ಕಾಮಗಾರಿಯನ್ನು ವೀಕ್ಷಿಸಿ ಪ್ರತೀ ಕಟ್ಟಡದ ಮುಖ್ಯ ಪ್ರವೇಶ ದ್ವಾರದಲ್ಲಿ ರೋಗಿಗಳು, ಅಶಕ್ತರು ಪ್ರವೇಶಿಸಲು ಅನುಕೂಲವಾಗುವಂತೆ ರ್ಯಾಂಪ್‍ಗಳನ್ನು ಕಡ್ಡಾಯವಾಗಿ ನಿರ್ಮಿಸುವಂತೆ ನಿರ್ದೇಶನ ನೀಡಿದರು
ಆಸ್ಪತ್ರೆ ಆವರಣದಲ್ಲಿ ಸಾಕಷ್ಟು ವಾಹನಗಳ ನಿಲುಗಡೆಗೆ ಅವಕಾಶವಾಗುವಂತೆ ಪಾರ್ಕಿಂಗ್ ಸ್ಥಳಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಆಸ್ಪತ್ರೆಯ ಕಟ್ಟಡದ ಸುತ್ತಲೂ ಕಾಂಪೌಂಡ್ ನಿರ್ಮಾಣ, ನೀರಿನ ವ್ಯವಸ್ಥೆಗೆ ಆದ್ಯ ಗಮನಕೊಟ್ಟು ಈ ಸಂಬಂಧ ಕಾಮಗಾರಿ ವೇಗವಾಗಿ ಕೈಗೊಳ್ಳಲು ತಿಳಿಸಲಾಯಿತು.
ಪ್ರಸ್ತುತ ಆಸ್ಪತ್ರೆ ಪ್ರದೇಶದಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಕೆಗೂ ಅವಕಾಶವಿರಬೇಕು. ತ್ಯಾಜ್ಯ ನೀರಿನ ಶುದ್ಧೀಕರಣ ಘಟಕ ನಿರ್ಮಿಸಿ ಶುದ್ಧೀಕರಿಸಿದ ನೀರನ್ನು ಆಸ್ಪತ್ರೆ ಆವರಣದಲ್ಲಿಯೇ ನಿರ್ವಹಿಸಲಾಗುವ ಉದ್ಯಾನವನಗಳಿಗೆ ಬಳಕೆ ಮಾಡಿಕೊಳ್ಳಬೇಕು, ತ್ಯಾಜ್ಯ ನೀರು ಸರಾಗವಾಗಿ ಹರಿದುಹೋಗುವ ಅತ್ಯಾಧುನಿಕ ಚರಂಡಿ ವ್ಯವಸ್ಥೆಯು ಇರುವಂತೆ ನೋಡಿಕೊಳ್ಳಲು ತಿಳಿಸಿದರು
ವೈದ್ಯಕೀಯ ಕಾಲೇಜು, ಪ್ರಸ್ತುತ ನಿರ್ಮಾಣವಾಗುತ್ತಿರುವ ಆಸ್ಪತ್ರೆ ಸಂಪರ್ಕಿಸುವ ಈಗಿರುವ 40 ಅಡಿ ರಸ್ತೆಯನ್ನು ದ್ವಿಪಥ 60 ಅಡಿ ರಸ್ತೆಯನ್ನಾಗಿ ಮಾರ್ಪಡಿಸಲು ಅಗತ್ಯವಿರುವ ಅಂದಾಜು ಪಟ್ಟಿ ಪ್ರಸ್ತಾವನೆಯನ್ನು ಸಲ್ಲಿಸಲು ಸೂಚಿಸಲಾಯಿತು. ವೈದ್ಯಕೀಯ ಕಾಲೇಜು ಮುಂಭಾಗದಲ್ಲಿ ತುರ್ತಾಗಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಸ್ಪತ್ರೆಗೆ ಅಗತ್ಯವಾದ ವಿದ್ಯುತ್, ಕುಡಿಯುವ ನೀರು ಸೇರಿದಂತೆ ಎಲ್ಲಾ ಬಗೆಯ ಮೂಲ ಸೌಲಭ್ಯಗಳು ಲಭ್ಯವಾಗಬೇಕು. ಫೆಬ್ರವರಿ ಎರಡನೇ ವಾರದೊಳಗೆ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಸಬೇಕೆಂದು ನಿರ್ದೇಶನ ನೀಡಿದರು
ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರು ವಾಸ್ತವ್ಯ ಹೂಡಲು ಅನುಕೂಲವಾಗುವಂತೆ ಡಾರ್ಮಿಟರಿ ನಿರ್ಮಾಣ ಮಾಡಲು ಜಾಗದ ಅಗತ್ಯವಿದ್ದು ಆದಷ್ಟು ಶೀಘ್ರವೇ ಸ್ಥಳದಲ್ಲಿಯೇ ಇದ್ದ ತಹಶೀಲ್ದಾರ್ ಚಿದಾನಂದಗುರುಸ್ವಾಮಿ ಅವರಿಗೆ ತಕ್ಷಣವೇ ಡಾರ್ಮಿಟರಿ ಕಟ್ಟಡಕ್ಕಾಗಿ ಸ್ಥಳ ಗುರುತಿಸಿ ಒದಗಿಸುವಂತೆ ಸೂಚಿಸಿದರು.