ರಾಮನಗರ: ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ದ ಐ.ಎಫ್. ಆರ್ ದಾಖಲಿಸಲಾಗಿದೆ.
ಮೇಕೆದಾಟು ಯೋಜನೆಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ನವರು ಮಾಡುತ್ತಿದ್ದ ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಹಾಗೂ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಮಾಡಲಾಗಿದ್ದು ಐ.ಎಫ್. ಆರ್ ದಾಖಲಾಗಿದೆ.
ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ 30 ಮಂದಿಯ ಮೇಲೆ ಕನಕಪುರದ ಸಾತನೂರು ಪೊಲೀಸ್ ಠಾಣೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಐ.ಎಫ್. ಆರ್ ದಾಖಲು ಮಾಡಲಾಗಿದೆ.