ಚಾಮರಾಜನಗರ: ಕೊರೊನಾ ಲಸಿಕೆ ಪಡೆದ ಐವರು ವೈದ್ಯರಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯ 5 ಮಂದಿ ವೈದ್ಯರು ಕೊರೋನಾ ಲಸಿಕೆ ಪಡೆದಿದ್ದರೂ ಕೊರೊನಾ ಕಾಣಿಸಿಕೊಂಡಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ವೈದ್ಯರು ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯ ಒಂದು ಡೋಸ್ ಪಡೆದಿದ್ದರು. ಆದರೂ ಸಹ ಅವರಿಗೆ ಕಳೆದ 10 ದಿನಗಳ ಅಂತರದಲ್ಲಿ ಕೊರೊನಾ ವೈರಸ್ ಪಾಸಿಟಿವ್ ಆಗಿದೆ.
ಸದ್ಯ ಕೋವಿಡ್ ಪಾಸಿಟಿವ್ ಆಗಿರುವ ವೈದ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ.