ಡಿ.ಕೆ. ಶಿವಕುಮಾರ್ ಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಡಿಕೆಶಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.