ಮುಂಬೈ: ನಟಿ ಕಂಗನಾ ಅವರ ಕಚೇರಿ ಅಕ್ರಮ ಕಟ್ಟಡ ಎಂಬ ಆರೋಪದಡಿ ನೆಲಸಮಗೊಳಿಸಿದ್ದು ಈ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ.
ಮುಂಬೈನ ಪಾಲಿ ಹಿಲ್ ನಲ್ಲಿನ ಕಂಗನಾರ ಕಚೇರಿ ಕಟ್ಟಡದ ಆವರಣದಲ್ಲಿ ಅನುಮತಿ ಪಡೆಯದೇ ಹಲವು ಮಾರ್ಪಾಡು ಮಾಡಲಾಗಿದೆ ಎಂದು ಬಿಎಂಸಿ ಕಟ್ಟಡ ನೆಲಸಮಗೊಳಿಸುವ ಕಾರ್ಯಾಚರಣೆ ನಡೆಸಿತ್ತು.
ಈ ಕುರಿತು ಕಂಗನಾ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಕೋರ್ಟ್ ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ತಡೆಯಾಜ್ಞೆ ನೀಡಿದೆ.