ಕ್ರಿಕೆಟ್ ಬೆಟ್ಟಿಂಗ್ ತಡೆಗೆ ಮೈಸೂರಲ್ಲಿ ವಿಶೇಷ ತಂಡ

ಮೈಸೂರು: ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಟಗಿಸಿಕೊಂಡವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಡಿಸಿಪಿ ಡಾ. ಪ್ರಕಾಶ್ ಗೌಡ ಎಚ್ಚರಿಕೆ ನೀಡಿದ್ದಾರೆ.
ಐಪಿಎಲ್ ಪಂದ್ಯಾವಳಿ ಸೆ. 19 ರಿಂದ ಆರಂಭವಾಗಿದೆ. ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಮೈಸೂರಿನ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ವಿಶೇಷ ತಂಡವನ್ನು ರಚಿಸಲಾಗಿದೆ.
ಕ್ರಿಕೆಟ್ ಬೆಟ್ಟಿಂಗ್ ನಡೆಯುವ ಮಾಹಿತಿ ತಿಳಿದು ಬಂದಲ್ಲಿ ನಮಗೆ ಮಾಹಿತಿ ನೀಡಿ ಎಂದು ಡಿಸಿಪಿ ಡಾ. ಎ. ಪ್ರಕಾಶ್ ಗೌಡ ಅವರು ನಗರದ ನಾಗರೀಕರಲ್ಲಿ ಮನವಿ ಮಾಡಿದ್ದಾರೆ.
ಪೆÇೀಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದವರ ತಿಳಿಸಿದ್ದಾರೆ.