ಕ್ವಾರಿ ಮಾಲೀಕರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕ್ರಮ -ಡಾ. ಸುಧಾಕರ್

ಚಿಕ್ಕಬಳ್ಳಾಪುರ: ಕ್ವಾರಿ ಮಾಲೀಕರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಜಿಲ್ಲೆಯ ಹಿರೇನಾಗವೇಲಿಯಲ್ಲಿನ ಕ್ರಷರ್ ನಲ್ಲಿ ಜಿಲಿಟನ್ ಸ್ಫೋಟದ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಮಂಗಳವಾರ ಭೇಟಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಈ ಘಟನೆಯಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸುಧಾಕರ್ ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ಕೆ.ಸುಧಾಕರ್ ಘಟನಾ ಸ್ಥಳಕ್ಕೆ ಭೇಟಿ ನೀಟಿ ಮಾಹಿತಿಯನ್ನು ಪಡೆದುಕೊಂಡರು.
ಈ ಕ್ವಾರಿ ಅಧಿಕೃತವಾಗಿದೆ. ಕಳೆದ ತಿಂಗಳಲ್ಲಿ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಜಿಲೆಟಿನ್ ಸ್ಪೋಟಕ ಪ್ರಕರಣದ ನಂತರ ಜಿಲ್ಲಾಡಳಿತ ಹಾಗೂ ಪೆÇಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸತತವಾಗಿ ಕ್ವಾರಿಗಳ ಮೇಲೆ ದಾಳಿ ಮಾಡಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದರು. ಅದರ ನಂತರ ಇದೀಗ ಈ ದುರ್ಘಟನೆ ನಡೆದಿದೆ ಎಂದರು.
ಈ ಕ್ವಾರಿಯ ಮೇಲೆ ಫೆ. 7ರಂದು ದಾಳಿ ನಡೆಸಿ ಅನಧಿಕೃತವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ಸ್ಫೋಟಕ ವಸ್ತುಗಳ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಈ ಕ್ವಾರಿ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ ಸ್ಫೋಟಕ ವಸ್ತುಗಳನ್ನು ಪೆÇಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳ ಭಯದಿಂದಾಗಿ ನಾಶಪಡಿಸಲು ಸಾಗಿಸುವ ವೇಳೆ ಈ ದುರಂತ ನಡೆದಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಸುಧಾಕರ್ ಹೇಳಿದರು.
ಕ್ವಾರಿ ಮಾಲೀಕರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು. ಇವನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿರುವ ಸಚಿವರು, ಇನ್ನು ಸ್ಫೋಟದಿಂದ ಮೃತರಾದ ಕಾರ್ಮಿಕರ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.